ಕುಂದಾಪುರ: ಕಲಿಕೆಯ ಜೊತೆಯಲ್ಲಿ ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ಭಾಗವಹಿಸುವಂತೆ ಮಾಡಿದಾಗ ಅವರಲ್ಲಿ ಧೈರ್ಯ, ಶಿಸ್ತು ಬೆಳೆಯುತ್ತದೆ ಎಂದು ಕುಂದಾಪುರ ಪುರಸಭೆಯ ಸದಸ್ಯ ಪ್ರಭಾಕರ ಕುಂದಾಪುರ ಹೇಳಿದರು.
ಅವರು ಶುಕ್ರವಾರ ಉಡುಪಿ ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ, ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ- ಬಾಲಕಿಯರ ಕರಾಟೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ ವಿದ್ಯಾರ್ಥಿಗಳನ್ನು ಕ್ರೀಡಾ ಚಟುವಟಿಕೆಯಲ್ಲಿ ತೋಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಬೇಕು.ಯಾವ ವಿದ್ಯಾರ್ಥಿ ಕ್ರೀಡೆಯನ್ನು ನಿರಂತರವಾಗಿ ಅಭ್ಯಾಸ ಮಾಡುತ್ತಾನೋ ಆ ವಿದ್ಯಾರ್ಥಿ ಕಲಿಕೆಯಲ್ಲಿ ಸದಾ ಮುಂದೆ ಇರುತ್ತಾನೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಅತೀ ವಂ.ಫಾ. ಪೌಲ್ ರೆಗೋ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕರ ಗಣಪತಿ,
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಶೋಭಾ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಅಧ್ಯಕ್ಷ ಲೋಹಿತಾಶ್ವ ಉದ್ಯಾವರ, ಕುಂದಾಪುರ ತಾಲೂಕು ಕರಾಟೆ ಅಸೋಸಿಯೇಶನ್ ಅಧ್ಯಕ್ಷ ಕಿರಣ್ ಕುಮಾರ್, ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ರೋಹನ್ ಡಿ.ಕ್ರಾಸ್ಟೋ, ಉಡುಪಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ರವೀಂದ್ರ ನಾಯ್ಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿಶನ್ರಾಜ್ ಶೆಟ್ಟಿ, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಸತ್ಯನಾರಾಯಣ, ಅರುಣ್ ಕುಮಾರ್, ರವಿಚಂದ್ರ ಕಾರಂತ, ತಾಲೂಕು ಯುವಜನ ಸೇವಾ ಕ್ರೀಡಾ ಅಧಿಕಾರಿ ಕುಸುಮಾಕರ್ ಶೆಟ್ಟಿ, ಉಡುಪಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಕಾರ್ಯದರ್ಶಿ ವಾಮನ್ ಸಾಲಿಯಾನ್, ಕುಂದಾಪುರ ಪುರಸಭೆಯ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ,ಲಯಸ್ಸ್ ರಿಜನಲ್ ಚೇರ್ಪಸ್ಮನ್ ಬಾಲಕೃಷ್ಣ ಶೆಟ್ಟಿ, ಹಂಗಳೂರು ಲಯನ್ಸ್ ಕ್ಲಬ್ ಕಾರ್ಯದರ್ಶಿ ಮ್ಯಾತೂ ಜೋಸೆಪ್, ಕೋಶಾಧಿಕಾರಿ ಪುನೀತಾರಾಜ್, ನಿವೃತ್ತ ಮುಖ್ಯ ಶಿಕ್ಷಕ ಲೂಯಿಸ್ ಜೆ.ಫೆರ್ನಾಂಡಿಸ್, ಉದ್ಯಮಿ ಅನೂಪ್ಕುಮಾರ್ ಬಿ.ಆರ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿಯರಾದ ಸಿಸ್ಟರ್ ಚೇತನಾ, ಪ್ರೀತಿ ಪಾಯಸ್, ಸ್ಮಿತಾ ಡಿ.ಸೋಜಾ, ಡೀನಾ ಪಾಯಸ್ ಸಹಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.