

ಕುಂದಾಪುರ : ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲೆಯ 2023-24 ನೇ ಸಾಲಿನ ಶಾಲಾ ಆರಂಭೋತ್ಸವವನ್ನು ಸಂಭ್ರಮದಿಂದ ನರವೇರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿಯರು ಹಾಗೂ ವಿದ್ಯಾರ್ಥಿಗಳು ದೀಪ ಬೆಳಗಿಸಿ ಚಾಲನೆ ನೀಡಿದರು. ತಳಿರು-ತೋರಣ,ಬಲೂನು ಕಟ್ಟಿ, ಬ್ಯಾಂಡಿನೊಂದಿಗೆ ಭವ್ಯ ಮೆರವಣೆಯ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ, ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್ ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಹಿರಿಯ ಶಿಕ್ಷಕ ಭಾಸ್ಕರ್ ಗಾಣಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಬಲೂನ್ ಹಾಗೂ ವಾದ್ಯದೊಂದಿಗೆ ವಿದ್ಯಾರ್ಥಿಗಳನ್ನು ಶಿಕ್ಷಕರು ಪ್ರೀತಿಯಿಂದ ಬರಮಾಡಿಕೊಂಡರು. ವಿದ್ಯಾರ್ಥಿಗಳಿಗೆ ಪಾಯಸದೊಂದಿಗೆ ಬಿಸಿಯೂಟ ನೀಡಲಾಯಿತು.








