

ಕುಂದಾಪುರ ; ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ಜೂನ್ 27 ರಂದು ನಡೆಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ಸಂಸತ್ತಿನ ಸದಸ್ಯರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಆಗಮಿಸಿದ ಶಾಲಾ ಜಂಟಿ ಕಾರ್ಯದರ್ಶಿಗಳಾಗಿರುವ ಸಿಸ್ಟರ್ ಸುಪ್ರಿಯ ಇವರು ಶಾಲಾ ಮಕ್ಕಳಲ್ಲಿ ನಾಯಕತ್ವ ಹಾಗೂ ಜವಾಬ್ದಾರಿ ನಿರ್ವಹಣಾ ಸಾಮರ್ಥ್ಯ ಗುಣಗಳನ್ನು ಬಳಸುವಲ್ಲಿ ಶಾಲಾ ಸಂಸತ್ತು ಪ್ರಮುಖ ಪಾತ್ರ ವಹಿಸುತ್ತದೆ. ಶಾಲಾ ಆಡಳಿತದಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರನ್ನು ಬೆಳೆಸಲು ಅನುಕೂಲವಾಗುತ್ತದೆ. ಶಾಲಾ ಕಲಿಕೆಯ ಜೊತೆಜೊತೆಗೆ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿದರೆ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನು ದೇಶಕ್ಕೆ ಕಾಣಿಕೆಯಾಗಿ ನೀಡಬಹುದು ಎಂದರು. ಇದೇ ಸಂದರ್ಭದಲ್ಲಿ ವಿವಿಧ ವಿಷಯ ಸಂಘಗಳ ಉದ್ಘಾಟನೆಯನ್ನು ಮಾಡಿದ ಅವರು ‘ಪ್ರತಿಭೆ ಎಲ್ಲರಲ್ಲಿಯೂ ಇದೆ ಅದಕ್ಕೊಂದು ಅವಕಾಶ ಸಿಕ್ಕಾಗ ಅದು ಅರಳುತ್ತದೆ. ಈ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳ ವ್ಯಕ್ತಿತ್ವ ಅನಾವರಣಕ್ಕಾಗಿ ವಿವಿಧ ಸಂಘಗಳ ಅಗತ್ಯವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಮ ವಸ್ತ್ರಗಳನ್ನು ವಿತರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ಸ್ವಾಗತಿಸಿದರು. ಹಿರಿಯ ಶಿಕ್ಷಕರಾದ ಮೈಕಲ್ ಸರ್ ಇವರು ಕಾರ್ಯಕ್ರಮ ನಿರೂಪಿಸಿದರು.












