JANANUDI.COM NETWORK

ಕುಂದಾಪುರ: ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಗೀತ ಗಾಯನ ಕಾರ್ಯಕ್ರಮ ಕುಂದಾಪುರ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯ ವಠಾರದಲ್ಲಿ ಸಂಭ್ರಮದಿಂದ ಗುರುವಾರ ಜರುಗಿತು.
ಸೈಂಟ್ ಮೇರಿಸ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜ್ ಹಾಗೂ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಯಿತು.
ಕನ್ನಡ ಗೀತ ಗಾಯನ, ಕನ್ನಡ ಘೋಷಣೆಗಳ ಭಿತ್ತಿಫಲಕ, ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ವಾದನ, ಜೋಗ ಜಲಪಾತದ ನಡುವೆ ತಾಯಿ ಭುವನೇಶ್ವರಿ ಎಲ್ಲರ ಗಮನ ಸೆಳೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಮೂಹ ಸಂಪನ್ಮೂಲ ವ್ಯಕ್ತಿ ಶಂಕರ್ ಶೆಟ್ಟಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ, ಸೈಂಟ್ ಮೇರಿಸ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೆಸಾಶಾಂತಿ, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಶ್ಮಾ ಫೆರ್ನಾಂಡೀಸ್ ಉಪಸ್ಥಿತರಿದ್ದರು.
ಉಪನ್ಯಾಸಕ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಹಿರಿಯ ಶಿಕ್ಷಕ ಭಾಸ್ಕರ ಗಾಣಿಗ ಸಂಕಲ್ಪ ಬೋಧಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.