ಕುಂದಾಪುರ (ಫೆ.15) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಶಿಕ್ಷಕರಿಗಾಗಿ “ಕಲಿಕಾ ನ್ಯೂನ್ಯತೆಯ ಕಾರಣಗಳು” ಎಂಬ ವಿಷಯಾಧಾರಿತ ಶಿಕ್ಷಕ ಪುನಶ್ಚೇತನ ಕಾರ್ಯಾಗಾರ ಫೆಬ್ರವರಿ 13, ಮಂಗಳವಾರದಂದು ಜರುಗಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ, ಕೇರಳದ, ಕೊಚ್ಚಿನ್ನಲ್ಲಿ ಮಕ್ಕಳ ಮನಶಾಸ್ತ್ರಜ್ಞರು ಮತ್ತು ಹಿರಿಯ ಸಲಹೆಗಾರರಾಗಿರುವ ಡಾ. ಫಿಲಿಪ್ ಜಾನ್ ಆಗಮಿಸಿ, ಮಕ್ಕಳಲ್ಲಿ ಕಂಡುಬರುವ ಕಲಿಕಾ ನ್ಯೂನ್ಯತೆಗಳು, ಅದಕ್ಕೆ ಕಾರಣಗಳು ಮತ್ತು ಪರಿಹಾರೋಪಾಯಗಳನ್ನು ಬಹಳ ಮನೋಜ್ಞವಾಗಿ ಶಿಕ್ಷಕರಿಗೆ ಅರುಹಿದರು. ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು