

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿಯನ್ನು ಬಳ್ಕೂರು ನಿವಾಸಿ ಬಸವ ಪೂಜಾರಿ (55) ಎಂದು ಗುರುತಿಸಲಾಗಿದೆ.
ಕಂಡ್ಲೂರುನಿಂದ ಬಸ್ರೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಬಸ್ರೂರುನಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಲೂನ ವಾಹನಕ್ಕೆ ನೇರವಾಗಿ ಬಂದು ಗುದ್ದಿದ್ದು ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.