

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಯುವಕರು ಸಮುದ್ರಪಾಲಾಗಿರುವ ಘಟನೆ ಇಂದು ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆಂದು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದ ಈ ಇಬ್ಬರು, ಬೀಜಾಡಿ ಬೀಚ್ ಸಮೀಪದ ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದಾರೆನ್ನಲಾಗಿದೆ. ಬೆಳಿಗ್ಗೆ ಇಬ್ಬರೂ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ್ದಾರೆ.
ಕೂಡಲೇ ಸ್ಥಳೀಯರು ಓರ್ವನನ್ನು ಮೇಲಕ್ಕೆ ಎತ್ತಿ ಆಸ್ಪತ್ರೆಗೆ ಸಾಗಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ದಾರಿ ಮಧ್ಯೆ ಮೃತಪಟ್ಟರು. ಆದರೆ ನಾ ಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ