

ಕುಂದಾಪುರ :ವಿಶ್ವ ಯೋಗ ದಿನಾಚರಣೆಯ ದಿನದಂದು (21-06-2024) ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ದೈಹಿಕ ಶಿಕ್ಷಕರಾದ ಮೈಕಲ್ ಪುಟಾರ್ಡೊ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ವಿಶ್ವ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ದೈಹಿಕ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಯೋಗದ ಆಸನಗಳನ್ನು ಪ್ರದರ್ಶಿಸಲಾಯಿತು.