ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಮ್ಮೇಳನ

JANANUDI.COM NETWORK


ಕುಂದಾಪುರ: ಅನುದಾನಿತ ಪ್ರೌಢಶಾಲಾ ಶಿಕ್ಷಕರು ಹಲವು ಸಮಸ್ಯೆಯನ್ನು ಎದುರಿಸುತ್ತಿದ್ದು ಸಂಘಟನೆಯ ಮೂಲಕ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಉಡುಪಿ ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಹೇಳಿದರು.
ಅವರು ಶನಿವಾರ ಕುಂದಾಪುರ ಆರ್.ಎನ್.ಶೆಟ್ಟಿ ಮಿನಿ ಹಾಲ್‍ನಲ್ಲಿ ನಡೆದ ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರದ ಹಲವು ಸೌಲಭ್ಯಗಳು ಅನುದಾನಿತ ಶಾಲಾ ಶಿಕ್ಷಕರಿಗೆ ದೊರೆಯದೇ ನಾವೆಲ್ಲ ಅತಂತ್ರರಾಗಿದ್ದೇವೆ. ಸಂಘಟಿತರಾಗಿ ಸಂಘಟನೆಯನ್ನು ಕಟ್ಟಿಬೆಳೆಸುದರ ಜತೆಗೆ ಸರಕಾರದ ಎಲ್ಲಾ ಸೌಲಭ್ಯ ಪಡೆದುಕೊಳ್ಳಬೇಕು. ಉಡುಪಿ ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಮ್ಮೇಳನ ನಡೆಸಿ ನಮ್ಮ ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಸಬೇಕಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ವಲಯದ ಅನುದಾನಿತ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಪ್ರದೀಪ್‍ಕುಮಾರ್ ಶೆಟ್ಟಿ ವಹಿಸಿದ್ದರು.
ಉಡುಪಿ ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಜಯಶೀಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಉದಯಕುಮಾರ್, ಬ್ರಹ್ಮಾವರ ವಲಯದ ಅಧ್ಯಕ್ಷ ಗಣೇಶ್ ಚೆಲ್ಲಿಮಕ್ಕಿ, ಬೈಂದೂರು ವಲಯದ ಅಧ್ಯಕ್ಷ ಮಂಜು ಕಾಳಾವರ ವಿವಿಧ ವಿಷಯದ ಮಾತನಾಡಿದರು.
ಕುಂದಾಪುರ ವಲಯದ ಪ್ರಧಾನ ಕಾರ್ಯದರ್ಶಿ ರಾಜಾರಾಮ ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ ಗಾಣಿಗ ವಂದಿಸಿದರು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.