

ಕುಂದಾಪುರ ; “ನಿತ್ಯ ಜೀವನದಲ್ಲಿ ಕನ್ನಡ ಭಾಷೆಯನ್ನು ಬಳಸಲು ಅಳುಕಬಾರದು. ಕನ್ನಡ ಮಾತನಾಡಿದರೆ ಗೌರವ ಕಡಿಮೆಯಾಗುವುದೇನೋ ಎಂಬ ಹಿಂಜರಿಕೆ ಸಲ್ಲದು. ಕನ್ನಡ ಭಾಷೆಯ ಬಗ್ಗೆ ಸಹಜ ಪ್ರೀತಿ ಅಭಿಮಾನವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಆಚರಣೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಗಳೆಲ್ಲರೂ ಉಪಸ್ಥಿತರಿದ್ದರು.

