

ಬೆಂಗಳೂರು : ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಢದಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಹಿಂದುತ್ವವಾದಿ ಭಾಷಣಗಾರ್ತಿ , ಕುಂದಾಪುರದ ಚೈತ್ರಾ ಮತ್ತು ಅವಳ ತಂಡದ ವಿರುದ್ಧ 68 ಸಾಕ್ಷಿಗಳು ಕಲೆ ಹಾಕಿ 800 ಪುಟಗಳ ಚಾರ್ಜ್ ಶೀಟ್ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಬುಧವಾರ ನಗರದ 3ನೇ ಎಸಿಎಂಎಂ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿರುವ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಚೈತ್ರಾಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕೊಟ್ಯಂತರ ರೂ. ವಂಚನೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಸಿಬಿ ಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಸಿಸಿಬಿ ಘಟಕದ ಮಹಿಳಾ ಸಂರಕ್ಷಣಾ ದಳದ ಎಸಿಪಿ ನೇತೃತ್ವದಲ್ಲಿ ತನಿಖೆ ಕೈಗೊಂಡ ಅಧಿಕಾರಿಗಳು ಪ್ರಮುಖ ಆರೋಪಿ ಚೈತ್ರಾಳನ್ನು ಸೇರಿ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಚೈತ್ರಾ ಹಾಗೂ ಉಳಿದ ಆರೋಪಿಗಳು ವಂಚನೆ ಪ್ರಕರಣದಲ್ಲಿ ತಮ್ಮ ಪಾತ್ರಗಳ ಬಗ್ಗೆ ತನಿಖಾಧಿಕಾರಿ ಎದುರು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ತಪ್ಪೊಪ್ಪಿಗೆಯನ್ನು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಆರೋಪಿಗಳು ಉದ್ಯಮಿಯಿಂದ ಎಲ್ಲೆಲ್ಲಿ ಹಣ ಪಡೆದಿದ್ದರು. ಏನೆಲ್ಲ ಖರೀದಿಸಿದ್ದರು. ಎಲ್ಲೆಲ್ಲಿ ಹೂಡಿಕೆ ಮಾಡಿದ್ದರು ಎಂಬುದರ ಬಗ್ಗೆ ಸೂಕ್ತ ಪುರಾವೆಗಳನ್ನು ಸಲ್ಲಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.