

ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಶ್ರೀ ಪ್ರೀತೇಶ್ ಶೆಟ್ಟಿಯವರು ಅಧಿಕಾರ ಸ್ವೀಕರಿಸಿರುತ್ತಾರೆ. ರಸಾಯನ ಶಾಸ್ತ್ರ ವಿಷಯದಲ್ಲಿ ಎಮ್. ಎಸ್.ಸಿ ವ್ಯಾಸಂಗ ಮಾಡಿರುವ ಇವರು ಕಳೆದ 22 ವರ್ಷಗಳಿಂದ ಸಹ ಸಂಸ್ಥೆಯಾದ ವಿ.ಕೆ. ಆರ್. ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನೂತನ ಉಪಪ್ರಾಂಶುಪಾಲರಾಗಿ ನೇಮಕಗೊಂಡ ಶ್ರೀ ಪ್ರೀತೇಶ್ ಶೆಟ್ಟಿಯವರನ್ನು ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂಧಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.