

ಕೋಟ:ಕರ್ನಾಟಕದ ಆಯ್ದ 10 ಜಿಲ್ಲೆಗಳಲ್ಲಿ ಜೆಇ ಲಸಿಕಾಕರಣ ಅಭಿಯಾನ ನಡೆಯುತ್ತಿದ್ದು, ಇದರಲ್ಲಿ 1ರಿಂದ 15 ವರ್ಷಗಳವರೆಗಿನ ಎಲ್ಲಾ ಮಕ್ಕಳಿಗೂ ಜೆಸಿ ಲಸಿಕೆಯನ್ನು ಉಚಿತವಾಗಿ ಸರಕಾರ ನೀಡುತ್ತಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್ ಹೇಳಿದರು.
ಅವರು ಸೋಮವಾರ ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ,ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರದ ಆಶ್ರಯದಲ್ಲಿ ಜೆಇ ಲಸಿಕಾ ಅಭಿಯಾನಕ್ಕೆ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಚಾಲನೆ ನೀಡಿ ಮಾತನಾಡಿದರು. ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯೆ ಡಾ.ದೀಪಾ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ವಹಿಸಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಬಿ.ಐ.ಇ.ಆರ್.ಟಿಯ ಶಂಕರ್ ಕುಲಾಲ್,ಸಿಆರ್ ಪಿ ಶಂಕರ ಶೆಟ್ಟಿ,ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್,ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೇಜಾ ಶಾಂತಿ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ಚಂದ್ರ ಶೇಖರ ಬೀಜಾಡಿ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.
