

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಎನ್. ಅನುಚೇತ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿ ಶುಭ ಹಾರೈಸಿತು.
ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ದೇವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭೇಟಿಯ ವೇಳೆ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಹಾಗೂ ಮಾಧ್ಯಮ ಸಂಜೀವಿನಿ ಯೋಜನೆ ಕುರಿತಂತೆ ನೂತನ ಆಯುಕ್ತರ ಗಮನ ಸೆಳೆಯಲಾಯಿತು.
ಇದೇ ವೇಳೆ ಜುಲೈ 1ರಂದು ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಕೂಡ ಉಪಸ್ಥಿತರಿದ್ದರು.

