

ಶ್ರೀನಿವಾಸಪುರ : ತಾಲೂಕಿನ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ 2023 – 24 ನೇ ಸಾಲಿನ 669 ನೇ ನಮ್ಮೂರು ನಮ್ಮ ಕೆರೆ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನಕೆರೆ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಊರಿನ ಗಣ್ಯರಾದ ಶಂಕರ್ ರೆಡ್ಡಿ ಅವರು ಉದ್ಘಾಟಿಸಿದರು..
ಕಾರ್ಯಕ್ರಮದ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಶ್ರೀನಿವಾಸಪುರ ತಾಲೂಕಿನ ಯೋಜನಾಧಿಕಾರಿಯವರಾದ ಪ್ರಕಾಶ್ ಕುಮಾರ್ ಮಾತನಾಡುತ್ತಾ ರಾಜ್ಯದಲ್ಲಿ 67% ಕೆರೆಗಳಲ್ಲಿ ಅರ್ಧದಷ್ಟು ನೀರಿಲ್ಲದೆ ಇರುವುದು ವಿಪರ್ಯಾಸವಾಗಿದೆ. ರಾಜ್ಯದೆಲ್ಲೆಡೆ ಮುಂಗಾರು ಅಬ್ಬರಿಸುತ್ತಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು ಕೆರೆಗಳು ತುಂಬಿ ಕೃಷಿ ಚಟುವಟಿಕೆಗಳಿಗೆ ನೀರು ಬಳಕೆಯಾಗುತ್ತಿದೆ, ಆದರೆ ಇನ್ನು ಕೆಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಹಾಗೂ ಕೆರೆಯಲ್ಲಿ ಹೂಳು ತುಂಬಿರುವುದರಿಂದ ಕೆರೆಗಳಲ್ಲಿ ನೀರಿಲ್ಲದೆ ಕೃಷಿ ಮಾಡುವುದು ಬಹಳ ಕಷ್ಟವಾಗಿದೆ, ಇದನ್ನೆಲ್ಲ ಅರಿತ ಪೂಜ್ಯ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆಯವರು 2016ರಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವನ್ನು ತಂದು ಇದುವರೆಗೂ 6105.51 ಕೋಟಿ ಅನುದಾನ ನೀಡಿ 787 ಕೆರೆಗಳನ್ನು ಅಭಿವೃದ್ಧಿಪಡಿಸಿರುವುದಾಗಿ ತಿಳಿಸಿದರು.
ನಂತರ ಊರಿನ ಗಣ್ಯರಾದ ಶಂಕರ್ ರೆಡ್ಡಿ ಅವರು ಮಾತನಾಡುತ್ತಾ ಧರ್ಮಸ್ಥಳ ಸಂಸ್ಥೆ ಹಲವಾರು ಸಂಘ-ಸಂಸ್ಥೆಗಳಿಗೆ ಮಾದರಿಯಾಗಿದೆ. ಏಕೆಂದರೆ ನಿಸ್ವಾರ್ಥ ಸೇವೆಯನ್ನು ಮಾಡುವ ಮನೋಭಾವ ಎಲ್ಲರಲ್ಲೂ ಇರಲು ಸಾಧ್ಯವಿಲ್ಲ ಆದರೆ ಧರ್ಮಸ್ಥಳ ಸಂಸ್ಥೆ ಬಡವರ್ಗದವರ ಏಳಿಗೆಗಾಗಿ ಶ್ರಮಿಸುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದರು.
ಈ ಸಂದರ್ಭದಲ್ಲಿ ಊರಿನ ಗಣ್ಯರಾದ ಮದ್ದಿ ರೆಡ್ಡಿ, ಅಶ್ವಥ್ ರೆಡ್ಡಿ, ಜಯಮ್ಮ, ಹಾಗೂ ವಲಯದ ಮೇಲ್ವಿಚಾರಕರಾದ ಉಮೇಶ್ ಕೃಷಿ ಮೇಲ್ವಿಚಾರಕರಾದ ರಮೇಶ್ ಸೇವಾ ಪ್ರತಿನಿಧಿ ನಾಗರತ್ನಮ್ಮ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

