ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ದರಖಾಸ್ತುದಾರರಿಗೆ ನಿಯಮಾನುಸಾರ ಜಮೀನು ಮಂಜೂರು ಮಾಡಲಾಗುವುದು. ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ದರಖಾಸ್ತು ಕಮಿಟಿ ಸಭೆಯಲ್ಲಿ ಮಾತನಾಡಿ, ಮೊದಲಿಗೆ ನಿಯಮ 53 ರ ಅಡಿಯಲ್ಲಿ ಹಾಕಲಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು. ನಿಯಮ 57 ಅಡಿ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಹೇಳಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆಗಿರುವ ಪ್ರಗತಿಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹೊಸದಾಗಿ ಐದು ಮಂದಿಗೆ ಸಾಗುವಳಿ ಚೀಟಿ ನೀಡಲಾಯಿತು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ರಾಯಲ್ಪಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ ಇದ್ದರು.