


ಶ್ರೀನಿವಾಸಪುರ 3 ತಾಲೂಕಿನ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಅವಗಾನಪಲ್ಲಿ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಕಾರು ಅಪಘಾತದಲ್ಲಿ ವಕೀಲ ಮುಬಾರಕ್ ಪಾಷಾ (34 ವರ್ಷ) ಮೃತಪಟ್ಟಿರುವ ಘಟನೆ ನಡೆದಿದೆ.
ವಿವರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಪ್ರೇಮ್ ನಗರದ ವಾಸಿಯಾದ ಮೃತ ಮುಬಾರಕ್ರವರು ಕೆಲಸದ ನಿಮಿತ್ತ ಚಿಂತಾಮಣಿ ಯಿಂದ ತಾಡಿಗೋಳ್ ಕ್ರಾಸ್ ಮೂಲಕ ಗೌನಿಪಲ್ಲಿಗೆ ಹೋಗುವ ಮಾರ್ಗ ಮಧ್ಯದಲ್ಲಿನ ಅವಗಾನಪಲ್ಲಿ ಗ್ರಾಮದ ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಹೊಡೆದ ಪರಿಣಾಮ ರಸ್ತೆ ಬದಿಯ ಚರಂಡಿಗೆ ಬಿದ್ದಿರುವ ಕಾರು . ಕಾರಿನಲ್ಲಿ ಇದ್ದ ಮುಬಾರಕ್ ರವರಿಗೆ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಅಂಬಲೆನ್ಸ್ ಮೂಲಕ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದರು. ತಲೆಗೆ ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಾಪಿದ್ದಾನೆ. ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
