

ಮಂಗಳೂರು: ನಗರದ ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23)
ಅಪರೂಪದ ಫುಡ್ ಅಲರ್ಜಿ “ಅನಾಫಿಲ್ಯಾಕ್ಸ್ ರಿಯಾಕ್ಷನ್ ಫುಡ್ ಅಲರ್ಜಿ”

ಅಪರೂಪದ ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.
ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಉದಯ ಕುಮಾರ್ ಅವರು “ಅನಾಫಿಲ್ಯಾಕ್ಸ್ ರಿಯಾಕ್ಷನ್ ಫುಡ್ ಅಲರ್ಜಿಯ ಅಂತಿಮ ಫಟ್ಟ. ಆಹಾರದ ಅಲರ್ಜಿಯಿಂದ ಸಾವು ಸಂಭವಿಸುವುದು ಅಪರೂಪದಲ್ಲಿ ಅಪರೂಪ. ಶೇ.59 ಜನರಲ್ಲಿ ಫುಡ್ ಅಲರ್ಜಿ ಇದ್ದು ಆ ಬಗ್ಗೆ ಎಚ್ಚರ ವಹಿಸುತ್ತಾರೆ. ಹೆಚ್ಚಿನ ಪ್ರಮಾಣದಲ್ಲಿಆಲರ್ಜಿ ಇದ್ದಲ್ಲಿ ವೈದ್ಯರಿಂದ ಸಲಹೆ. ಸೂಚನೆ ಪಡೆಯುವುದು ಉತ್ತಮ.
ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ(ಅನಾಫಿಲ್ಯಾಕ್ಟಿಕ್ ರಿಯಾಕ್ಷನ್) ಸಮಸ್ಯೆ ಇತ್ತು. ಇದರಿಂದಾಗಿ ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ
ಸಾವಿನಲ್ಲೂ ಸಾರ್ಥಕತೆ

ಗ್ಲೋರಿಯಾಳ ಸಾವು ಅನಿರೀಕ್ಷಿತವಾಗಿದ್ದು ಸಾವಿನಲ್ಲಿ ಅಂಗಾಂಗದಾನಮಾಡುವ ಮೂಲಕ ಪೋಷಕರು ಶ್ರೇಷ್ಠ ‘ಕಾರ್ಯಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.ಗ್ಲೋರಿಯಾ ರೋಡ್ರಿಗಸ್ ಅವರ ದೇಹದ ಅಂಗಾಂಗವನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣು, ಹೃದಯ, ಚರ್ಮ, ಯಕೃತ್, ಎರಡು ಕಿಡ್ನಿ, ಶ್ವಾಸಕೋಶವನ್ನು ದಾನ ಮಾಡಲಾಗಿದೆ. ಯಕೃತ್(ಲಿವರ್) ಮಂಗಳೂರಿನ ಎಜೆ ಆಸ್ಪತ್ರೆಗೆ ನೀಡಲಾಗಿದೆ. ಶ್ವಾಸಕೋಶವನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರಗೆ ನೀಡಲಾಗಿದೆ. ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ರವಾನಿಸಲಾಗಿದೆ. ಕಿಡ್ನಿಯನ್ನು ಕೆಎಂಸಿ ಆಸ್ಪತ್ರೆ ಮಣಿಪಾಲ ಹಾಗೂ ಚರ್ಮ ಹಾಗೂ ಕಣ್ಣುಗಳನ್ನು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಡಲಾಗಿದೆ
ಗ್ಲೋರಿಯಾ ತಂದೆ ಗ್ರೇಶನ್ ಆಲೆಕ್ಸ್ , ತಾಯಿ ಗ್ರೆಟ್ಟಾ ಫ್ಲಾವಿಯಾ ರೊಡ್ರಿಗಸ್ ಮತ್ತು ಸಹೋದರನನ್ನು ಅಗಲಿದ್ದಾರೆ.