ಕುಂದಾಪುರ,16: ಸಂತ ಜೋಸೆಪರ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇವರ ಆಶ್ರಯದಲ್ಲಿ 15-08-2023 ರಂದು “ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ರೋ.ಜಗನ್ನಾಥ್ ಮೊಗೆರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ವಕೀಲರಾದ ವೈ ಶರತ್ ಕುಮಾರ್ ಶೆಟ್ಟಿ ಇವರು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು ಮಾಹಿತಿ ನೀಡಿದರು. ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಅಗತ್ಯವಾದ ಸಾಮಾಜಿಕ ಮತ್ತು ರಾಜಕೀಯ ವಾತಾವರಣವನ್ನು ಮೂಲಭೂತ ಹಕ್ಕುಗಳು ಎಂದು ಕರೆಯುತ್ತಾರೆ. ನಮ್ಮ ಸಂವಿಧಾನದ ಮೂರನೇ ಭಾಗದಲ್ಲಿ ಮೂಲಭೂತ ಹಕ್ಕುಗಳನ್ನು ಅಳವಡಿಸಲಾಗಿದೆ. ಈ ಹಕ್ಕುಗಳು ಪ್ರಜಾಪ್ರಭುತ್ವದ ಯಶಸ್ವಿಗೆ ಅಗತ್ಯವಾದವುಗಳು. ಮೂಲಭೂತ ಕರ್ತವ್ಯಗಳ ಬಗ್ಗೆ ಪ್ರಸ್ತಾವಿಸುತ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಮೂಲಭೂತ ಹಕ್ಕುಗಳಿರುವಂತೆ ಕರ್ತವ್ಯಗಳಿಗೆ ನ್ಯಾಯಾಲಯದ ರಕ್ಷಣೆ ಇರುವುದಿಲ್ಲ. ಕರ್ತವ್ಯಗಳನ್ನು ಉಲ್ಲಂಘಿಸಿದವರಿಗೆ ಸಾಮಾನ್ಯ ಕಾನೂನಿನ ಅನ್ವಯ ಶಿಕ್ಷೆ ವಿಧಿಸಲಾಗುತ್ತದೆ’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಶುಭ ಹಾರೈಸಿದರು. ಶಿಕ್ಷಕರಾದ ಮೈಕಲ್ ಪುಟಾರ್ಡೊ ಸ್ವಾಗತಿಸಿದರು. ಶಿಕ್ಷಕಿ ಸರಸ್ವತಿಯವರು ವಂದಿಸಿದರು. ಶಿಕ್ಷಕ ಅಶೋಕ್ ದೇವಾಡಿಗ ನಿರೂಪಿಸಿದರು. ರೋಟರಿ ಕಾರ್ಯದರ್ಶಿಯಾಗಿರುವ ರೋ. ಡಾ. ವಿಲಾಸ್ ಕೃತಿಕ್ ಸದಸ್ಯರಾದ ರೋ.ವಿನ್ಸೆಂಟ್ ಬರೆಟ್ಟೊ , ರೋ. ನಟರಾಜ್, ರೋ. ಕೌಶಿಕ್ ಇವರು ಉಪಸ್ಥಿತರಿದ್ದರು. ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.