ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಲಾಕ್ ಡೌನ್ ಪರಿಹಾರಕ್ಕೆ ನಾಳೆಯಿಂದಲೇ ಅರ್ಜಿ ಸ್ವೀಕಾರ

JANANUDI.COM NETWORK

ಬೆಂಗಳೂರು,ಮೇ.27: ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ತೊಂದರೆಗೀಡಾಗಿರುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ ಸಹಾಯ ನೀಡಲು ಸರ್ಕಾರ ನಿರ್ಧರಿಸಿತ್ತು, ಅದರಂತೆ ಸಾರಿಗೆ ಇಲಾಖೆಯಿಂದ ಪರಿಹಾರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ.
”ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು’ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಾಳೆ (ಮೇ 27) ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಪ್ರಾರಂಭವಾಗುವುದು. ಅರ್ಜಿ ಸಲ್ಲಿಸಿದ ಸೂಕ್ತ ಫಲಾನುಭವಿಗಳ ಅಕೌಂಟ್ ಗಳಿಗೆ ನೇರವಾಗಿ ಈ ಪರಿಹಾರ ಧನವನ್ನು ವರ್ಗಾಯಿಸಲಾಗುವುದೆಂದು ಬಡ ಚಾಲಕರ ನೆರವಿಗೆ ಮುಂದಾಗಿರುವ ನಮ್ಮ ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳಬೇಕು’ ಎಂದು ಸವದಿ ಮನವಿ ಮಾಡಿಕೊಂಡಿದ್ದಾರೆ.