ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಪಟ್ಟಣದ ರಂಗಾರಸ್ತೆಯಲ್ಲಿ ಭಾನುವಾರ ಲೋಕ ಕಲ್ಯಾಣಾರ್ಥ ನಾಗರ ಕಲ್ಲು ಪ್ರತಿಷ್ಠಾಪನಾ ಮಹೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ತಾಲ್ಲೂಕು ವಿಶ್ವಕರ್ಮ ಸಮುದಾಯದ ಪರವಾಗಿ, ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ಹಾಗೂ ಪುರಸಭೆಯ ಮಾಜಿ ಸದಸ್ಯೆ ರಾಧಮ್ಮ ಮೋಹನಾಚಾರಿ ಅಶ್ವತ್ಥಕಟ್ಟೆ ಮೇಲೆ ನೂತನವಾಗಿ ಪ್ರತಿಷ್ಠಾಪಿಸಿದರು.
ಈ ಸಂದರ್ಭದಲ್ಲಿ ದೇವತಾ ವಿಗ್ರಹಗಳಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಪಂಡಿತರಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಘದ ಮಹಿಳಾ ಘಟಕದ ಸದಸ್ಯರಿಂದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತೀರ್ಥ, ಪ್ರಸಾದ ವಿನಿಯೋಗ ಮಾಡಲಾಯಿತು.
ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಮಾಜಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಜಿ.ರಾಜಣ್ಣ, ಮುಖಂಡರಾದ ವೈ.ಆರ್.ಶಿವಪ್ರಕಾಶ್, ಬಿ.ಎಂ.ಸೂರ್ಯನಾರಾಯಣ, ಪೂಲ ಶಿವಾರೆಡ್ಡಿ, ಮುನೀಶ್ವರಾಚಾರಿ, ನಾಗರಾಜಾಚಾರಿ, ರವಿಚಂದ್ರಾಚಾರಿ ಇದ್ದರು.