ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2024 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.07% ಎನ್.ಪಿ.ಎ. ದಾಖಲಿಸಿದೆ.
ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2023–2024ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿAದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯ ಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಿದ್ದು, ಪ್ರಸ್ತುತ ವರ್ಷ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಭಾರತೀಯ ರಿಸರ್ವ್ ಬ್ಯಾಂಕಿನಿAದ ಅನುಮತಿ ದೊರಕಿದ್ದು, ಇದೊಂದು ಮಹತ್ವದ ಸಾಧನೆಯಾಗಿರುತ್ತದೆ. ಈಗಾಗಲೇ ಬ್ರಹ್ಮಾವರದಲ್ಲಿ ಬ್ಯಾಂಕಿನ 17ನೇ ಶಾಖೆಯನ್ನು ತೆರೆದಿದ್ದು, ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಶಾಖೆಗಳನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರರಿಗೆ (ಎನ್ಆರ್ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಆಗಿರುತ್ತದೆ. ಇಡೀ ಕರ್ನಾಟಕದಲ್ಲಿ ಹಂತ ಹಂತಗಳÀಲ್ಲಿ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಬ್ಯಾಂಕಿನ ವ್ಯವಹಾರವು ಡಿಸೆಂಬರ್ ಅಂತ್ಯಕ್ಕೆ ರೂ. 1000 ಕೋಟಿ ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆಯಾಗಿರುತ್ತದೆ.
ಪ್ರಸ್ತುತ ಆರ್ಥಿಕ ವರ್ಷದಲ್ಲಿ ಅನಿಲ್ ಲೋಬೊ ನೇತ್ರತ್ವದ 14 ಸದಸ್ಯರು 2023-28 ವರ್ಷಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು, ದಿನಾಂಕ 28, ಅಗೊಸ್ತ್ 2023ರಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅನಿಲ್ ಲೋಬೊ ಅವರು ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಬ್ಯಾಂಕಿನ ಸದಸ್ಯರು ಬ್ಯಾಂಕಿನ ಮೇಲೆ ಹೊಂದಿರುವ ವಿಶ್ವಾಸವೇ ಇದಕ್ಕೆ ಕಾರಣವಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 17 ಶಾಖೆಗಳನ್ನು ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್ 2023–24 ವಿತ್ತೀಯ ವರ್ಷದಲ್ಲಿ ದಾಖಲೆಯ ರೂ. 13.12 ಕೋಟಿ ವ್ಯವಹಾರಿಕ ಲಾಭವನ್ನು ಗಳಿಸಿದೆ. 2023–24 ವಿತ್ತೀಯ ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು, ಬ್ಯಾಂಕಿನ ನಿವ್ವಳ ಮೌಲ್ಯ (ಓeಣ Woಡಿಣh) ರೂ. 62.45 ಕೋಟಿಯಿಂದ ರೂ.76.35 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ. 1081 ಕೋಟಿ ದಾಟಿದ್ದು ಕಳೆದ ವರ್ಷಕ್ಕಿಂತ ಶೇಕಡಾ 16 ಏರಿಕೆಯಾಗಿದೆ.
ಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತು ಅಧಿಕಾರಿವರ್ಗ ಹಾಗೂ ಸಿಬ್ಬಂದಿಯ ಶ್ರಮದಿಂದ ಇದು ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿರುತ್ತಾರೆ.
: ಪತ್ರಿಕಾ ಗೋಷ್ಠಿಯಲ್ಲಿ ಹಾಜರಿರುವವರು :
ಅನಿಲ್ ಲೋಬೊ – ಅಧ್ಯಕ್ಷರು, ಜೆರಾಲ್ಡ್ ಜೂಡ್ ಡಿಸಿಲ್ವ – ಉಪಾಧ್ಯಕ್ಷರು, ನಿರ್ದೇಶಕರಾದ – ಆಂಡ್ರೂ÷್ಯ ಡಿಸೊಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೊಜಾ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೆರೊ, ರೋಶನ್ ಡಿಸೊಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೊಜಾ, ಆಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿ ಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂದಕರು – ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.
M.C.C. Bank records INR 13.12 cr profit, Expands area of operation to Karnaaka state, 3 more new Branches at Kavoor, Belthangady and Shivamogga.
MCC Bank Ltd, fondly known as MCC Bank, is set to complete 112 years of devoted service this year, having accomplished noteworthy progress across all business metrics for the financial year ending 31st March 2024.
The Bank recorded an exceptional pre-audit operating Profit of INR 13.12 Crore for the fiscal year, consistently striving to reduce the Net NPA, and successfully decreasing it to 1.07% of the total advances for the first time in recent years. As of December 2023, the Bank reached a milestone of INR 1000 Crore in total business turnovers, further increasing to INR 1081 Crore by the close of 31st March 2024 showing a growth of 16%. Boasting an enhanced net worth of INR 76.35 Crore compared to the previous INR 62.45 Crore, the Bank continues to benefit from NRI support.
Initially serving only the twin districts of coastal Karnataka—Dakshina Kannada and Udupi—the Bank expanded its reach to adjacent districts like Uttara Kannada, Shivamogga, Chickmagaluru, Hassan, and Coorg, thanks to the diligent efforts of the management team headed by Anil Lobo. With approval granted by Reserve Bank of India to expand operations statewide during the past financial year, the Bank opened its 17th branch in Brahmavara following a 22-year lapse. Further expansion plans include opening three new branches in Kavoor, Belthangady, and Shivamogga throughout the ongoing financial year. The 2nd Urban Co. operative Bank in Karnataka having NRI facility.
Last fiscal year witnessed the uncontested election of a 14-member management team, led by Anil Lobo, for another 5-year term (2023-28). This overwhelming endorsement reflects the faith placed in the management by the Bank’s members. Unanimously chosen as Chairman of the Board of Directors, Anil Lobo expressed gratitude for the confidence bestowed upon him.
Achieving such impressive growth can be attributed primarily to the unwavering support from members, customer trust, and dedicated efforts of Bank employees. Looking ahead, the Bank aims to attain even greater success in the current financial year with continued backing from esteemed members and clients along with committed staff members.
Present in the meeting:
Anil Lobo – Chairman, Jerald Jude D’Silva – Vice Chairman, Andrew D’Souza, Dr Gerald Pinto, Anil Patrao, J.P. Rodrigues, David D’Souza, Elroy Kiran Crasto, Herald Monteiro, Roshan D’Souza, Melvyn Vas, Vincent Lasrado, C.G. Pinto, Sushanth Saldanha, Irene Rebello, Dr Freeda D’Souza, Alwyn Monteiro, Felix D’Cruz, Sharmila Menezes – Directors and Sunil Menezes – General Manager were present.