

ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್ ಹೈವೇಯಲ್ಲಿ 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮೂಲಗಳಿಂದ ತಿಳಿದು ಬಂದಿದೆ.
ಅಪಘಾತಕ್ಕೀಡಾದ ಬಸ್ಸು ಯಾವತ್‌ಮಾಲ್‌ನಿಂದ ಪುಣೆಗ ಹೋಗುತ್ತಿತ್ತು. ಶುಕ್ರವಾರ ತಡರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್‌ನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು. 6-8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.
ಘಟನೆಯಲ್ಲಿ ಬದುಕುಳಿದಿರುವ ಬಸ್‌ನ ಚಾಲಕನ ಪ್ರಕಾರ, ಬಸ್ಸಿನ ಟೈರ್ ಸ್ಫೋಟಗೊಂಡ ಕಾರಣದಿಂದಾಗಿ ಬಸ್ ಪಲ್ಟಿಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ತೀಳಿಯಲಾಗಿದೆ.
