

ಕುಂದಾಪುರ: ಅಕ್ಟೋಬರ್ 17ರಂದು ಭಂಡಾರ್ಕಾರ್ಸ್ ಕಾಲೇಜಿನ ಬಿ.ಬಿ.ಎ ವಿಭಾಗದ ಆಶ್ರಯದಲ್ಲಿ ಮ್ಯಾನೇಜ್ಮೆಂಟ್ ಫೆಸ್ಟ್ “ಮ್ಯಾಗ್ನಸ್” ಉದ್ಘಾಟನಾ ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ನೆರವೇರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ.ಅನಂತ ಪದ್ಮನಾಭ ಆಚಾರ್ಯ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಬಿ.ಬಿ.ಎ ವಿಭಾಗದ ಮುಖ್ಯಸ್ಥರಾದ ಅರ್ಚನಾ ಅರವಿಂದ್, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಪಾಠ ಮತ್ತು ಪಠ್ಯೇತರ ಚಟುವಟಿಕೆ ಆಧಾರಿತ ಕಾರ್ಯಕ್ರಮಗಳು ನಡೆದವು.

