ನಿವಾಸಪುರ ಹೊರವಲಯದಲ್ಲಿನ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಶನಿವಾರ ಏರ್ಪಡಿಸಿದ್ದ ಕಲೋತ್ಸವ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಪ್ರದರ್ಶನವನ್ನು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಉದ್ಘಾಟಿಸಿದರು.
ವಿದ್ಯಾರ್ಥಿಗಳು ಸಂಸ್ಕಾರ ಮೈಗೂಡಿಸಿಕೊಂಡು ಬೆಳೆಯಬೇಕು
ಶ್ರೀನಿವಾಸಪುರ: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡು ಬೆಳೆಯಬೇಕು. ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಯನ್ನು ಗೌರವಿಸಬೇಕು ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಹೇಳಿದರು.
ಪಟ್ಟಣದ ಹೊರವಲಯದಲ್ಲಿನ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಶನಿವಾರ ಏರ್ಪಡಿಸಿದ್ದ ಕಲೋತ್ಸವ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋಲಾರ ಜಿಲ್ಲೆ ಆರ್ಥಿಕವಾಗಿ ಹಿಂದುಳಿದಿದ್ದರೂ, ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಯಲ್ಲಿದೆ. ಅದಕ್ಕೆ ವಿದ್ಯಾರ್ಥಿಗಳ ಪರಿಶ್ರಮ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.
ಆದಿಚುಂಚನಗಿರಿ ಸಂಸ್ಥಾನ ಮಠದಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ದೃಷ್ಟಿಯಿಂದ ಉಚಿತ ಶಾಲೆಯೊಂದನ್ನು ತೆರೆಯಲಾಗಿದೆ. ಭೈರವೇಶ್ವರ ವಿದ್ಯಾಸಂಸ್ಥೆಯ ಶೇ. 20 ರಷ್ಟು ಮಕ್ಕಳು ಉಚಿತ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆಯುವುದರೊಂದಿಗೆ ಸಾಂಸ್ಕøತಿಕವಾಗಿ ಎತ್ತರರ್ಕೆ ಬೆಳೆಯಬೇಕು ಎಂದು ಹೇಳಿದರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಸಿಎಒ ಡಾ. ಎನ್.ಶಿವರಾಮರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಸಾಧಿಸುವ ಕನಸು ಕಾಣಬೇಕು. ಸಾಯುವ ಮುನ್ನ ಕಂಡ ಕನಸುಗಳನ್ನು ನನಸು ಮಾಡಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಕಷ್ಟಗಳನ್ನು ದಾಟಿ ಸುಖ ಕಾಣಲು ದೊಡ್ಡ ಪ್ರಯತ್ನ ಹಾಕಬೇಕು. ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಜತೆಗೂಡಿ ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.
ಸಂಗೀತ ವಿದ್ವಾನ್ ರಾಘವೇಂದ್ರ ಬೇಜಾಡಿ ಮಾತನಾಡಿ, ಸಂಗೀತ ಕೇಳುಗರ ಮನಸ್ಸನ್ನು ಅರಳಿಸುವಂತಿರಬೇಕು. ಮನಸ್ಸನನ್ನು ವಿಕಾರಗೊಳಿಸುವ ಮತ್ತು ಕೆರಳಿಸುವ ಸಂಗೀತದಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಾಗಾಗಿ ಜನರು ಜನಪದ ಹಾಗೂ ಭಾವಗೀತೆಗಳನ್ನು ಕೇಳಿಸಿಕೊಳ್ಳಬೇಕು. ಮನೋವುಲ್ಲಾಸ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೋಲಾರದ ಸಿಬಿಐಟಿ ಕಾರ್ಯದರ್ಶಿ ಕ್ರಿಷ್ಣಾರೆಡ್ಡಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕೀಳರಿಮೆ ತೊರೆದು ಇಷ್ಟಪಟ್ಟು ಓದಬೇಕು. ಸಾಧನೆ ಮೂಲಕ ಗೌರವಕ್ಕೆ ಪಾತ್ರರಾಗಬೇಕು. ಕೃಷಿಕರ ಮಕ್ಕಳು ಶ್ರಮದೊಂದಿಗೆ ಶಿಕ್ಷಣ ಮುಂದುವರಿಸುವುದು ಸಾಮಾನ್ಯ ಸಂಗತಿಯಾಗಿದೆ. ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಿಧ್ಯಾರ್ಥಿಗಳು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ರಾಘವೇಂದ್ರ ಬೇಜಾಡಿ ಜಾನಪದ ಹಾಗೂ ಭಾವಗೀತೆಗಳನ್ನು ಹಾಡಿ ರಂಜಿಸಿದರು. ಮಂಗಳನಾಥ ಸ್ವಾಮೀಜಿ ಹಾಗೂ ರಾಘವೇಂದ್ರ ಬೇಜಾಡಿ ಅವರನ್ನು ಶಾಲಾ ಹೊರ ಭಾಗದಿಂದ ವೇದಿಕೆಯ ಬಳಿಗೆ ಅಲಂಕೃತ ಎತ್ತಿನ ಗಾಡಿಯಲ್ಲಿ ಮೆರವಣಿಗೆಯಲ್ಲಿ ಕರೆತರಲಾಯಿತು.
ಬಿಜಿಎಸ್ ವಿದ್ಯಾ ಸಂಸ್ಥೆಗಳ ನಿರ್ದೇಶಕ ಎ.ವೆಂಕಟರೆಡ್ಡಿ, ಪ್ರಾಂಶುಪಾಲರಾದ ಎ.ಗಂಗಾಧರಗೌಡ, ಬಿ.ಎನ್.ಕೃಷ್ಣಮೂರ್ತಿ, ಬಿ.ವೆಂಕಟರವಣರೆಡ್ಡಿ