

ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸೊಂದು ಚಲಿಸುತ್ತಿರುವಾಗಲೇ ದಿಢೀರ್ ಬೆಂಕಿಗಾಹುತಿಯಾದ ಭೀಕರ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 36 ಮಂದಿ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ.
ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ , ಈ ಖಾಸಗಿ ಬಸ್ ಭರತ್ ಕಂಪನಿಗೆ ಸೇರಿದ್ದು ಆಗಿತ್ತು. ಶಾಂತಿಗ್ರಾಮದ ಬಳಿ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ, ಹಿಂಬದಿ ಟೈಯರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿತ್ತು, ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 36 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ. ನಂತರ ಬಸ್ ಬೆಂಕಿಗೆ ಆಹುತಿಯಾಗಿದೆ.

