

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಪುರುಷರ ಮತ್ತು ಮಹಿಳಾ ವಿಭಾಗದಗೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಸಮಗ್ರ ಪ್ರಶಸ್ತಿಯೊಂದಿಗೆ ಪ್ರಥಮ ಸ್ಥಾನ ಪಡೆಯಿತು.
ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಮಂಗಳೂರಿನ ಎಸ್.ಜಿ.ಸಿ ಕಾಲೇಜು, ತೃತೀಯ ಸ್ಥಾನವನ್ನು ವಿಶ್ವವಿದ್ಯಾಲಯ ಕಾಲೇಜು, ಮಂಗಳೂರು ಮತ್ತು ಚತುರ್ಥ ಸ್ಥಾನವನ್ನು ಮಂಗಳೂರಿನ ಕಾರ್ ಸ್ಟ್ರೀಟ್ ನ ಜಿ.ಎಫ್.ಜಿ.ಸಿ ಕಾಲೇಜು ಪಡೆಯಿತು.

ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ವಿಶ್ವವಿದ್ಯಾಲಯ ಕಾಲೇಜು ಮಂಗಳೂರು, ತೃತೀಯ ಸ್ಥಾನವನ್ನು ಮಂಗಳೂರು ವಿಶ್ವವಿದ್ಯಾಲಯ, ಕೊಣಾಜೆ, ಚತುರ್ಥ ಸ್ಥಾನವನ್ನು ಉಜಿರೆಯ ಎಸ್.ಡಿ.ಎಂ ಕಾಲೇಜು ಪಡೆಯಿತು.
ಬಹುಮಾನ ವಿತರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಪೋಲಿಸ್ ಅಧಿಕಾರಿ ಆದರ್ಶ್ ಕುಮಾರ್ ಶೆಟ್ಟಿ, ವಕ್ವಾಡಿಯ ಗುರು ಹನುಮ ಕೇಟರಿಂಗ್ ಇದರ ಭರತ್ ಕುಮಾರ್ ಶೆಟ್ಟಿ, ಕಾಂತಾರ ಸಿನಿಮಾ ಖ್ಯಾತಿಯ ರಕ್ಷಿತ್ ಶೆಟ್ಟಿ, ವೀಕ್ಷಕರಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಡಾ. ಹರಿದಾಸ ಕೂಳೂರು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಕುಸ್ತಿ ಸಂಘಟನೆಯಿಂದ ಕಾಲೇಜಿನ ದೈಹಿಕ ನಿರ್ದೇಶಕ ಶಂಕರನಾರಾಯಣ ಅವರನ್ನು ಸನ್ಮಾನಿಸಲಾಯಿತು.