ಮಾವು ಟೊಮೆಟೊ ಬೆಳೆ ರಕ್ಷಣೆಗೆ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು : ವಿಜ್ಞಾನಿ ಡಾ. ಡಿ.ಎಸ್.ಅಂಬಿಕಾ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಮಾವು ಮತ್ತು ಟೊಮೆಟೊ ಬೆಳೆ ರಕ್ಷಣೆಗೆ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಡಿ.ಎಸ್.ಅಂಬಿಕಾ ಹೇಳಿದರು.
ತಾಲ್ಲೂಕಿನ ಸಾತಾಂಡ್ಲಹಳ್ಳಿ ಗ್ರಾಮದಲ್ಲಿ ತೊಟಗಾರಿಕಾ ಇಲಾಖೆ ಹಾಗೂ ಕೋಲಾರದ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ರೈತರ ಬೆಳೆಗಳಿಗೆ ಕೀಟ ಹಾಗೂ ರೋಗ ಹತೊಟಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶೇ.90 ರಷ್ಟು ರೈತರು ಮಾವು ಬೆಳೆಯ ಮೇಲೆ ಆಧಾರ ಪಟ್ಟಿದ್ದಾರೆ ಎಂದು ಹೇಳಿದರು.
ಮಾವು ಮತ್ತು ತರಕಾರಿ ಬೆಳೆಗಳಲ್ಲಿ ರೋಗ ಹಾಗೂ ಕೀಟಗಳ ಹತೋಟಿಗೆ ಆದ್ಯತೆ ನೀಡಬೇಕು. ತಜ್ಞರ ಸಲಹೆ ಪಡೆದು ಕೀಟ ಹಾಗೂ ರೋಗ ನಾಸಕ ಸಿಂಪಡಿಸಬೇಕು. ಇಲ್ಲವಾದರೆ ಬೆಳೆ ಹಾಳಾಗಿ ನಷ್ಟ ಉಂಟಾಗುತ್ತದೆ. ಮುಖ್ಯವಾಗಿ ಹೂ ಬಿಡುವ ಸಂದರ್ಭದಲ್ಲಿ ಎಚ್ಚರ ವಹಿಸಬೇಕು. ನಿಗದಿತ ಸಮಯದಲ್ಲಿ ಮಾತ್ರ ಔಷಧ ಸಿಂಪಡಣೆ ಮಾಡಬೇಕು ಎಂದು ಹೇಳಿದರು.

ತೋಟಗಾರಿಕಾ ವಿಜ್ಞಾನಿ ಡಾ. ಜ್ಯೋತಿಕಟ್ಟೆ ಗೌಡರ್, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಎಚ್.ಶ್ರೀನಿವಾಸ್ ಎ.ಬೈರೆಡ್ಡಿ
ಸಹಾಯಕ ತೋಟಗಾರಿಕಾ ಅಧಿಕಾರಿಗಳಾದ ಮಂಜುನಾಥ್, ಈಶ್ವರರೆಡ್ಡಿ ಇದ್ದರು.

ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಫೆ.6 ರಂದು ಬೆಳಿಗ್ಗೆ 10.30 ಗಂಟೆಗೆ ಕಂದಾಯ ಇಲಾಖೆ ವತಿಯಿಂದ ಕಂದಾಯ ಹಾಗೂ ಪಿಂಚಣಿ ಅದಾಲತ್ ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ತಿಳಿಸಿದ್ದಾರೆ.
ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಿ, ಅದಾಲತ್ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.