

ಶ್ರೀನಿವಾಸಪುರ: ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಯ್ಕೆಯಾಗಿ ಜೆಡಿಎಸ್‍ನ ಮಂಜುಳಮ್ಮ ಚುನಾಯಿತರಾಗಿದ್ದಾರೆ.
ಹಿಂದಿನ ಅಧ್ಯಕ್ಷೆ ಕ್ರಿಷ್ಣಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 17 ಸದಸ್ಯರಿದ್ದು, ಮಂಜುಳಮ್ಮ 11 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರತ್ನಮ್ಮ 6 ಮತ ಪಡೆದು ಪರಾಭವ ಅನುಭವಿಸಿದ್ದಾರೆ.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಶಿವಕುಮಾರ್, ಪಿಡಿಒ ಎಸ್.ವಿನೋದ ಇದ್ದರು.
ವಿಜಯೋತ್ಸವ: ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ನಡೆಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ಸ್ಥಳೀಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗೇಶ್ ರೆಡ್ಡಿ, ಮುಖಂಡರಾದ ಸಿ.ಆರ್.ಟಿ.ವೆಂಕಟರಾಮರೆಡ್ಡಿ, ಕೃಷ್ಣಾರೆಡ್ಡಿ, ಮಂಜುನಾಥರೆಡ್ಡಿ, ಚಂದ್ರಶೇಖರ್, ಶ್ರೀರಾಮರೆಡ್ಡಿ, ರಾಮಕೃಷ್ಣಾರೆಡ್ಡಿ, ಸುರೇಶ್ ಬಾಬು, ಬಚ್ಚಿರೆಡ್ಡಿ, ನಾಗರಾಜ್ ಮತ್ತಿತರರು ಇದ್ದರು.