ರಾಜ್ಯದಲ್ಲಿ ಮೇ 13 ರಿಂದ ಮೇ 21 ರ ತನಕ ಮಿಂಚು ಬಿರುಗಾಳಿ ಸಹಿತ ಮಳೆಯಾಗುವ ಸೂಚನೆ ಹವಮಾನ ಇಲಾಖೆ ನೀಡಿದೆ. ಕಳೆದ ಎರಡು ದಿನಗಳಿಂದ ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಕೆಲವು ಕಡೆ ಸ್ವಲ್ಪ ಮಟ್ಟಿಗೆ ತಂಪಾಗಿದೆ. ಇನ್ನೂ ಕೆಲವು ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ನೀಡಲಾಗಿದೆ. ಬಿರುಗಾಳಿ ಸಹಿತ ಮಳೆಯಾಗಲಿದೆ.ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ನಿನ್ನೆ ಸಂಜೆಯಿಂದ ರಾಜ್ಯದ ಹಲವು ಕಡೆ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇದ್ದು ಸಂಜೆಯಾಗುತ್ತಲೇ ಹಲವು ಕಡೆ ಮಳೆ ಸುರಿದಿದೆ.
ರಾಜ್ಯದ 13 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಜನ ಎಚ್ಚರದಿಂದ ಇರುವಂತೆ ತಿಳಿಸಿದೆ.ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ. ಉತ್ತರ ಕರ್ನಾಟಕದ- ಬೆಳಗಾವಿ, ಧಾರವಾಡ, ಹಾವೇರಿ. ದಕ್ಷಿಣ ಕರ್ನಾಟಕ -ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗಕ್ಕೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ