

ಶ್ರೀನಿವಾಸಪುರ : ತಾಲ್ಲೂಕಿನಲ್ಲಿ ಗ್ರಾಮೀಣ ಬಡ ಹಾಗೂ ದುರ್ಬಲ ಮಹಿಳೆಯರ ಸುಂದರ ಬದುಕಿಗೆ ಅಗತ್ಯವಾಗಿರುವ ಅನೇಕ ಯೋಜನೆಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖೇನ ಅನುಷ್ಟಾನ ಮಾಡುತ್ತಿದ್ದು, ಈ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಬೆಂಗಳೂರು ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ಸೀನಪ್ಪ ತಿಳಿಸಿದರು.
ಪಟ್ಟಣದ ವೇಣು ವಿದ್ಯಾ ಸಂಸ್ಥೆ ಬಳಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವತಿಯಿಂದ ಭಾನುವಾರ ಶ್ರೀನಿವಾಸಪುರ -2 ನೂತನ ಯೋಜನಾ ಕಚೇರಿಯನ್ನು ಉದ್ಗಾಟಿಸಿ ಮಾತನಾಡಿದರು.
ಸದಸ್ಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಲಕ್ಷ್ಮಣ್ ಗೌಡ ರವರು ಮಾತನಾಡಿ ಆರ್ಥಿಕ ಸ್ವಾವಲಂಬನೆ ಹಾಗೂ ಅಭಿವೃದ್ಧಿ ಬಗ್ಗೆ ಮಾತನಾಡಿದರು..
ಶ್ರೀನಿವಾಸಪುರ 2 ಯೋಜನಾ ಕಚೇರಿಯ ಯೋಜನಾಧಿಕಾರಿಗಳಾದ ಕಾಂತಪ್ಪ ರವರು ತಾಲ್ಲೂಕಿನ ಸಾಧನಾ ವರದಿ ಹಾಗೂ ತಾಲ್ಲೂಕಿನ ಅಭಿವೃದ್ಧಿಯ ಅಂಕಿ ಅಂಶಗಳನ್ನು ಮಂಡಿಸಿದರು..
ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ನಿರ್ದೇಶಕರಾದ ಪದ್ಮಯ್ಯ , ಕೋಚಿಮುಲ್ ಮಾಜಿ ಅಧ್ಯಕ್ಷ ಬ್ಯಾಟಪ್ಪ ಕಸಾಪ ಜಿಲ್ಲಾಧ್ಯಕ್ಷ ಎನ್.ಬಿ.ಗೋಪಾಲಗೌಡ , ಮುಖಂಡ ಇ. ಶಿವಣ್ಣ, ತಾಲ್ಲೂಕಿನ ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು, ಕಚೇರಿ ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು, ವಿಎಲ್ಇ ಗಳು ಹಾಗೂ ಗ್ರಾಮಸ್ಥರು ಮುಖಂಡರು ಭಾಗವಹಿಸಿದ್ದರು.