

ಶಿರೂರು: ಶಿರೂರಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಉಡುಪಿ ಜಿಲ್ಲಾಡಳಿತದ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಉಡುಪಿ ಜಿಲ್ಲೆಯ ಸಂಸ್ಕೃತಿ ಮತ್ತು ವೈವಿಧ್ಯತೆಯನ್ನು ಬಿಂಬಿಸುವ ಮಾಸ್ಕಾಟ್ ಚಿತ್ರಕಲಾ ಸ್ಪರ್ಧೆಯನ್ನು ಜುಲೈ 27ರಂದು ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಉಡುಪಿ ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯತೆಯ ಪರಿಚಯ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯ ಆಶಯ ಮತ್ತು ಉದ್ದೇಶವನ್ನು ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ವಿವರಿಸಿದರು.
ಸ್ಪರ್ಧೆಯಲ್ಲಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಚಿತ್ರಕಲಾ ಪ್ರತಿಭೆಯನ್ನು ಅನಾವರಣಗೊಳಿಸಿದರು. ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ಕಲಾ ಕೌಶಲ್ಯವನ್ನು ಬೆಳೆಸಲು ಸ್ಪರ್ಧೆಯು ಉತ್ತಮ ವೇದಿಕೆಯಾಯಿತು.
ಚಿತ್ರಕಲಾ ಶಿಕ್ಷಕರಾದ ಮಾಧವ ದೇವಾಡಿಗ ಅವರು ಸ್ಪರ್ಧೆಯನ್ನು ಸಂಯೋಜಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

