

ಕೋಟ: ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಮೇ.14ರಂದು ಭಾನುವಾರ ಕುಂದಾಪುರ ವ್ಯಾಸರಾಜ ಮಠದಲ್ಲಿ ಸಾಮೂಹಿಕ ಉಪನಯನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದೆ. ಈಗಾಗಲೇ 50 ಮಂದಿ ವಟುಗಳು ಸಾಮೂಹಿಕ ಉಪನಯನಕ್ಕೆ ಹೆಸರು ನೊಂದಾಯಿಸಿಕೊಂಡಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಮಹಾಮಂಗಳಾರತಿ, 12.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.