

ಕುಂದಾಪುರ; ಅದಮ್ಯ ಸಂಕಲ್ಪ ಪ್ರತಿಷ್ಠಾನ, ರಥಬೀದಿ ಭಟ್ಕಳ ನೇತೃತ್ವದಲ್ಲಿ, ಶ್ರೀ ಮಾರಿಕಾಂಬಾ ದೇವಸ್ಥಾನ ಮತ್ತು ಚೆನ್ನಪಟ್ಟಣ ಶ್ರೀ ಹನುಮಂತ ದೇವಸ್ಥಾನದವರ ಸಹಕಾರದೊಂದಿಗೆ ಶ್ರೀ ವಿರಾಂಜನೇಯ ಧರ್ಮಛತ್ರ, ರಥಬೀದಿ ಭಟ್ಕಳದಲ್ಲಿ ಕುಂದಾಪುರ ರೆಡ್ ಕ್ರಾಸನ ರಕ್ತ ನಿಧಿ ಕೇಂದ್ರದ ಮೂಲಕ ಇತ್ತೀಚೆಗೆ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಯಿತು.
ಸುಮಾರು ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ರಕ್ತದಾನಿಗಳು ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ್ ಶೆಟ್ಟಿ, ಕಾರ್ಯಾದರ್ಶಿ ಸತ್ಯನಾರಾಯಣ ಪುರಾಣಿಕ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
