

ಕಜಕಿಸ್ತಾನದ ಉಕ್ಕಿನ ದೈತ್ಯ ಅರ್ಸೆಲರ್ ಮಿತ್ತಲ್ ಒಡೆತನದ ಗಣಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 32 ಕಾರ್ಮಿಕರು ಸಾವನ್ನಪ್ಪಿದ್ದು, 14 ಜನ ನಾಪತ್ತೆಯಾಗಿದ್ದಾರೆ.
ಮಿಥೇನ್ ಅನಿಲ ಸೋರಿಕೆಯಿಂದಾಗಿ ಕೊಸ್ಟೆಂಕೊ ಗಣಿಯಲ್ಲಿ ಸ್ಫೋಟ ಸಂಭವಿಸಿದ್ದು, 252 ಜನರಲ್ಲಿ 206 ಜನರನ್ನು ಸ್ಥಳಾಂತರಿಸಲಾಗಿದೆ. 18 ಜನರಿಗೆ ವೈದ್ಯಕೀಯ ನೆರವು ಅಗತ್ಯವಿದೆ ಎಂದು ಕಂಪನಿ ತಿಳಿಸಿದೆ.
ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಅರ್ಸೆಲರ್ ಮಿತ್ತಲ್ ವಿಶ್ವದ ಎರಡನೇ ಅತಿದೊಡ್ಡ ಉಕ್ಕು ಉತ್ಪಾದಕ ಕಂಪನಿಯಾಗಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಂಪನಿ ವಿರುದ್ಧ ಸರ್ಕಾರ ಕ್ರಮ ವಹಿಸಿದ್ದು, ಕಂಪನಿಯನ್ನು ವಶಪಡಿಸಿಕೊಳ್ಳಲು ಆದೇಶಿಸಿದೆ.