ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದ ನ್ಯಾಯಾಲಯದಲ್ಲಿ ಆ.14 ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಮೆಘಾ ಲೋಕ ದಾಲತ್ ಏರ್ಪಡಿಸಲಾಗಿದೆ ಎಂದು ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ತಿಳಿಸಿದ್ದಾರೆ.
ಅದಾಲತ್ನಲ್ಲಿ ರಾಜಿಯಾಗಬಹುದಾದ, ಈಗಾಗಲೆ ನ್ಯಾಯಾಲಯದಲ್ಲಿ ಇರುವ ಸಿವಿಲ್, ಕ್ರಿಮಿನಲ್, ವ್ಯಾಜ್ಯಗಳನ್ನು ಮತ್ತು ದಾಖಲಾಗದೆ ಇರುವ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.