

ಕೋಲ್ಕತ್ತಾದ ಸಂತ ಮದರ್ ತೆರೇಸಾರವರ ಪುಣ್ಯಸ್ಮರಣೆಯ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಕಥೊಲಿಕ್ ಸಭಾ ಘಟಕವು ಚರ್ಚಿನಲ್ಲಿರುವ ಹಿರಿಯರು ಮತ್ತು ಅಸ್ವಸ್ಥರ ಭೇಟಿಯ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ನಡೆಸಿತು.
ಸತತ 28 ವರ್ಷಗಳಿಂದ ನಡೆಯುವ ಈ ಕಾರ್ಯಕ್ರಮದ ನೇತೃವ್ವವನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಶ್ರೀ ಎಡ್ವರ್ಡ್ ಫೆರ್ನಾಂಡಿಸ್ ನವರು ವಹಿಸಿದ್ದರು. ಗಂಗೊಳ್ಳಿ ಕೊಸೆಸಾಂವ್ ಮಾತೆ ಚರ್ಚಿನ ಧರ್ಮಗುರುಗಳಾದ ವಂದನೀಯ ತೋಮಸ್ ರೋಶನ್ ಡಿಸೋಜ ರವರ ಮಾರ್ಗದರ್ಶನದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಕಥೊಲಿಕ್ ಸಭೆಯ ಸದಸ್ಯರು ಸುಮಾರು 28 ಜನರನ್ನು ಭೇಟಿ ಮಾಡಿ ಕುಶಲೋಪರಿ ಹಾಗೂ ಪ್ರಾರ್ಥನೆಗಳನ್ನು ನಡೆಸಿ, ಕಾಣಿಕೆ ನೀಡಿ ಗೌರವಿಸಿದರು.








