

ಬೆಂಗಳೂರು, ಜು.೧೬:”ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರಬೇಕು’ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.