ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ : ಹಾಲು ಉತ್ಪಾದಕರು ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು .
ಶಿಬಿರ ಕಚೇರಿ ಸಭಾಂಗಣದಲ್ಲಿ ಹಾಲು ಉತ್ಪಾದಕರಿಗೆ ಮೃತಪಟ್ಟ ರಾಸುಗಳ ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ , ೧೨ ಫಲಾನುಭವಿಗಳಿಗೆ ರೂ .೬.೫೦ ಲಕ್ಷ ಮೌಲ್ಯದ ಚೆಕ್ ವಿತರಿಸಲಾಗಿದೆ ಎಂದು ಹೇಳಿದರು.
ಕಚೇರಿ ಉಪ ವ್ಯವಸ್ಥಾಪಕ ಕೆ.ಎಸ್. ನರಸಿಂಹಯ್ಯ ಮಾತನಾಡಿ , ಹಾಲಿನ ಗುಣಮಟ್ಟ ಹೆಚ್ಚಿಸಲು ಹಸಿರು ಮತ್ತು ಒಣ ಮೇವಿನ ಜತೆಗೆ ಪಶು ಆಹಾರ , ಖನಿಜ ಮಿರ್ಶಣ , ಗೋಧಾರ ಶಕ್ತಿ ಮತ್ತು ಟ್ರಿಯೋ ಎನ್ ಬಿ ಸ್ಯಾಕ್ ಪುಡಿ ನೀಡಬೇಕು . ಕೆಚ್ಚಲು ಬಾವು ಹಾಗೂ ಕಾಲುಬಾಯಿ ಜ್ವರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಕಚೇರಿ ವಿಸ್ತರಣಾಧಿಕಾರಿಗಳಾದ ಎಂ.ಜಿ. ಶ್ರೀನಿವಾಸ್ , ಎನ್ . ಶಂಕರ್ , ಸಿಂಹರಾಜು , ಎಸ್.ವಿನಾಯಕ , ಕೆ.ಪಿ. ಶ್ವೇತ ಇದ್ದರು .
