

ಕುಂದಾಪುರ : ಶ್ರೀ. ಎನ್ . ಎಸ್. ಭೋಸರಾಜು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿಯವರ ಹುಯ್ಯಾರು ನಿವಾಸಕ್ಕೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ವಿಚಾರ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು .
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಮಂಜುನಾಥ ಭಂಡಾರಿ , ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ. ಕಿಶನ್ ಹೆಗ್ಡೆ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ , ಕಾಂಗ್ರೆಸ್ ಮುಖಂಡರಾದ ಎಂ. ದಿನೇಶ ಹೆಗ್ಡೆ , ಮುನಿಯಾಲು ಉದಯ ಕುಮಾರ ಶೆಟ್ಟಿ , ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ , ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪ ಸ್ಥಿತರಿದ್ದರು.
