

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿ ದಿನಾಂಕ 25 ಏಪ್ರಿಲ್ 2026ರಂದು ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಸುಂದರ್ ರಾಜ್, ಸಿಎಫ್ಓ,ಎನ್ ಎಕ್ಸ್ ಪಿ ಸೆಮಿಕಂಡಕ್ಟರ್ ಇವರು ಆಗಮಿಸಿ ಇಂದಿನ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಕ್ಕೆ ಸರಿಸಾಟಿಯಾಗಿ ಕ್ಷಮತೆಯನ್ನು ಬೆಳೆಸಿಕೊಂಡಾಗ ಮಾತ್ರ ಉದ್ಯೋಗಾವಕಾಶಗಳು ಸಿಗಲು ಸಾಧ್ಯ ಎಂದು ತಿಳಿಸಿದರು . ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಇವರು ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿದರು. ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಇವರು ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಐ ಎಂ ಜೆ ವಿದ್ಯಾಸಂಸ್ಥೆಗಳ ಡೈರೆಕ್ಟರ್ ಅಕಾಡೆಮಿಕ್ಸ್ ಆದ ಡಾ. ಎಸ್ ಎನ್ ಭಟ್ ಇವರು ಇಂದಿನ ಎ ಐ ಯುಗದಲ್ಲಿ ಗೆಲ್ಲಬೇಕಾದರೆ ಅದಕ್ಕೆ ಸರಿಯಾದ ಕ್ಷಮತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಅದೇ ಸಮಯದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಪ್ರಾಧ್ಯಾಪಕರಾದ ಶ್ರೀಮತಿ ಸುಷ್ಮಾ ಶೆಟ್ಟಿ ಮುಖ್ಯ ಅತಿಥಿಗಳ ಪರಿಚಯವನ್ನು ನೀಡಿದರು. ಪ್ರಾಧ್ಯಾಪಕರಾದ ಶ್ರೀಮತಿ ಫರಾನ, ಧನ್ಯವಾದ ಸಮರ್ಪಿಸಿದರು. ಎಂಬಿಎ ವಿದ್ಯಾರ್ಥಿಗಳಾದ ಕು.ಶಾಂಭವಿ ಮತ್ತು ಕು.ಅಧಿತಿ ಕಾರ್ಯಕ್ರಮವನ್ನು ನಿರೂಪಿಸಿದರು.

