ಶ್ರೀನಿವಾಸಪುರ: ಸ್ವಾತಂತ್ರ್ಯ ಯೋಧರ ತ್ಯಾಗ, ಹೋರಾಟ ಹಾಗೂ ಬಲಿದಾನದ ಮೂಲಕ ಪಡೆದುಕೊಂಡಿರುವ ಸ್ವಾತಂತ್ರ್ಯ ಅಮೂಲ್ಯವಾದುದು. ಅದು ಕೈಜಾರದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆದರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕಾಗಿ ಜೈಲುವಾಸ ಅನುಭವಿಸಿದ, ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರು ನಿತ್ಯ ಸ್ಮರಣೀಯರು ಎಂದು ಹೇಳಿದರು.
ಸ್ವಾತಂತ್ರ್ಯಾನಂತರ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಎಲ್ಲ ರಂಗಗಳಲ್ಲೂ ಗಣನೀಯ ಪ್ರಮಾಣದ ಪ್ರಗತಿಯಾಗಿದೆ. ಅಭಿವೃದ್ಧಿಯ ವೇಗ ಹೆಚ್ಚಬೇಕಾದರೆ, ಪ್ರತಿಯೊಬ್ಬರೂ ದೇಶದ ಹಿತರಕ್ಷಣೆ ದೃಷ್ಟಿಯಿಂದ ಪ್ರಾಮಾಣಿಕವಾಗಿ ದುಡಿಯಬೇಕು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಅರಿಬೇಕು ಎಂದು ಹೇಳಿದರು.
ತಾಲ್ಲೂಕಿನ ಜನರಿಗೆ ಉದ್ಯೋಗ ದೊಕಿಸಿಕೊಡುವ ಉದ್ದೇಶದಿಂದ ತಾಲ್ಲೂಕಿನಲ್ಲಿ ಸುಮಾರು 5 ಸಾವಿರ ಎಕರೆಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗುವುದು. ಆ ಕುರಿತು ರಾಜ್ಯ ಸರ್ಕಾರ ಹಾಗೂ ಕೇಂದ್ರ ಚಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿದೆ. ರೂ.40 ಕೋಟಿ ವೆಚ್ಚದಲ್ಲಿ ಶ್ರೀನಿವಾಸಪುರ ಕೋಲಾರ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುವುದು. ಅಗತ್ಯವಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಶಾಲಾಭಿವೃದ್ಧಿ, ರಸ್ತೆ ಹಾಗೂ ಚರಂಡಿ ನಿರ್ಮಾಣ ಕೈಗೊಳ್ಳಲಾಗುವುದು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಜಿ.ಎನ್. ಸುಧೀಂದ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮಹಾತ್ಮಾಗಾಂಧಿ ಅವರ ನೇತೃತ್ವದಲ್ಲಿ ನಡೆದ ಸ್ಯಾತಂತ್ರ್ಯ ಹೋರಾಟದಲ್ಲಿ ಪ್ರಮುಖ ನಾಯಕರು ಸೇರಿದಂತೆ ಲಕ್ಷಾಂತರ ಮಂದಿ ಭಾಗವಹಿಸಿದ್ದಾರೆ. ಕಷ್ಟ ನಷ್ಟ ಅನುಭವಿಸಿದ್ದಾರೆ. ದೇಶದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದರ ಮೂಲಕ ಸ್ವಾತಂತ್ರ್ಯ ಯೋಧರಿಗೆ ಗೌರವ ತಂದುಕೊಡಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಪೊಲೀಸ್ ಇಲಾಖೆ ಹಾಗೂ ವಿದ್ಯಾರ್ಥಿಗಳಿಂದ ಪಥ ಸಂಚಲನ ಏರ್ಪಡಿಸಲಾಗಿತ್ತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಟ್ಟರು. ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎ.ಎನ್.ರವಿ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮುನಿಲಕ್ಷ್ಮಯ್ಯ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಸಹಾಯಕ ಕೃಷಿ ನಿರ್ದೇಶಕ ಕೆ.ಸಿ.ಮಂಜುನಾಥ್, ಸಹಾಯಕ ತೋಟಗಾರಿಕಾ ನಿರ್ದೇಶಕ ಎ.ಬೈರೆಡ್ಡಿ, ಬೇರೆ ಬೇರೆ ಇಲಾಖೆಗಳ ಮುಖ್ಯಸ್ಥರಾದ ವೆಂಕಟಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಲೋಚನ, ಬಿಆರ್ಸಿ ಸಂಯೋಜಕಿ ಕೆ.ಸಿ.ವಸಂತ, ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕ ಎಸ್.ವಿ.ಜನಾರ್ಧನ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಎನ್.ನಾರಾಯಣಸ್ವಾಮಿ, ಬಿಸಿಎಂ ಇಲಾಖೆ ಅಧಿಕಾರಿ ಪ್ರಸನ್ನ, ಇಸಿಒ ಸುಬ್ರಮಣಿ, ಶಿಕ್ಷಕಿ ಜಯಲಕ್ಷ್ಮಿ ಇದ್ದರು.