ಕೋಲಾರ,ಆ.07: ನಗರದಲ್ಲಿ ಮಂಗಳವಾರ ಸಂಜೆ ಸುರಿದ ಬಾರಿ ಮಳೆಗೆ ಕೋಲಾರ ಚಿಕ್ಕಬಳ್ಳಾಪುರ ಮುಖ್ಯರಸ್ತೆಯ ಅರಹಳ್ಳಿ ಗೇಟ್ ರೈಲ್ವೆ ಬ್ರಿಡ್ಜ್ ಬಳಿ ಮಳೆಯ ನೀರು ಹೊರಗಡೆ ಹೋಗದೇ ನಿಂತಿದ್ದರಿಂದಾಗಿ ಅ ಭಾಗದಲ್ಲಿ ಸಂಚರಿಸುವ ಸಾರ್ವಜನಿಕವರಿಗೆ ತೀವ್ರ ತೊಂದರೆ ಅನುಭವಿಸಬೇಕಾಯಿತು.
ಕೂಡಲೇ ಶಾಸಕ ಕೊತ್ತೂರು ಮಂಜುನಾಥ್ ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿ ರೈಲ್ವೆ ಬ್ರಿಡ್ಜ್ ಬಳಿಯ ಮಳೆ ನೀರಿನ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು ಬುಧವಾರ ಬೆಳಗ್ಗೆ ಅಧಿಕಾರಿಗಳು ಪೈಪ್ ಗಳಿಗೆ ಅಡ್ಡಲಾಗಿದ್ದ ಕಸಕಡ್ಡಿ, ಪ್ಲಾಸ್ಟಿಕ್ ಕವರ್ ಮತ್ತು ಮಣ್ಣನ್ನು ಹೊರಹಾಕಿ ಮಳೆಯ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಯನ್ನು ಮಾಡಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಪ್ರಸ್ತುತ ಮಳೆಗಾಲ ಪ್ರಾಂಭವಾಗಿದೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿನ ಚರಂಡಿಗಳಿಂದ ಸರಾಗವಾಗಿ ನೀರು ಹರಿಯಲು ಮುಚ್ಚಿರುವ ಚರಂಡಿಯ ಕಾಲುವೆಗಳನ್ನು ಸ್ವಚ್ಚಗೊಳಿಸಲು ಗಮನ ಹರಿಸುವಂತೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.