ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ : ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು . ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೂಚಿಸಿದರು . ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಮಾತನಾಡಿ , ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ . ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು . ಮಾರುಕಟಯಲ್ಲಿ ಕೋವಿ ನಿಯಮ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು . ಮಾವು .. ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು ಮತ್ತಿತರರು ಬರುತ್ತಾರೆ . ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು . ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು . ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು . ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದು ಎಂದು ಹೇಳಿದರು , ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಆನಂದ್ , ಪುರಸಭಾಧ್ಯಕ್ಷ ಲಲಿತಾ ಶ್ರೀನಿವಾಸ್ , ಮುಖ್ಯಾಧಿಕಾರಿ ಸತ್ಯನಾರಾಯಣ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ , ಅಧಿಕಾರಿ ಆಶಾರಾಣಪ್ಪ , ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು .