

ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಜಿಯೋಥೆರಪಿ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ ನ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ನೆರವೇರಿತು
ಕಾರ್ಯಕ್ರಮದ ಉದ್ಘಾಟನೆಯನ್ನು ಗಣ್ಯರು ದೀಪ ಬೆಳಗುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆ ಮಣಿಪಾಲದ ಎಂ ಸಿ ಎಚ್ ಪಿ ಕಾಲೇಜ್ ನ ಡೀನ್ ಡಾ. ಜಿ. ಅರುಣ್ ಮೈಯ್ಯ ಅವರು ಭಾಗವಹಿಸಿ ಮೂಡ್ಲಕಟ್ಟೆಯ ಐ ಎಂ ಜೆ ವಿದ್ಯಾಸಂಸ್ಥೆಗಳ ಬೆಳವಣಿಗೆ ಯನ್ನು ಪ್ರಶಂಸಿಸಿ ಚೇರ್ಮನ್ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ ಯವರ ಹಾಗೂ ಎಲ್ಲಾ ಅಡಳಿತ ವರ್ಗ ಹಾಗೂ ಸಿಬ್ಬಂದಿಗಳ ಪ್ರಯತ್ನ ಶ್ಲಾಘನೀಯ ವೆಂದರು ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಸಾಧನೆಗಳನ್ನು ಪ್ರಶಂಸಿಸಿದರು.
ಗೌರವ ಅತಿಥಿಯಾಗಿ ಮಂಗಳೂರು ಹರ್ಷ ಮೋಡರ್ನ್ ಡಯಾಗ್ನೊಸ್ಟಿಕ್ ಸೆಂಟರ್ನ ವೈದ್ಯಕೀಯ ನಿರ್ದೇಶಕಿ ಡಾ. ಪ್ರಿಯದರ್ಶಿನಿ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸಮಾಜಕ್ಕೆ ಸಹಾಯ ಮಾಡಲು ಒದಗಿರುವ ಸುವರ್ಣಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು. ಕಾರ್ಯದಲ್ಲಿ ನವೀನತೆ
ಮತ್ತು ಸ್ಥಿರತೆ ಬಹಳಮುಖ್ಯ ಅಂದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ಡಾ. ಪದ್ಮಚರಣ ಸ್ವೈನ್, ಎಂ ಐ ಟಿ ಕೆ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಪ್ರಾಂಶುಪಾಲರಾದ ಹೇಮಲತಾ, ಉಪ ಪ್ರಾಂಶುಪಾಲರಾದ ಸೌಜನ್ಯ ಹಾಗೂ ಕಾರ್ಯಕ್ರಮ ಸಂಯೋಜಕಿ ಚಿತ್ರಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೈಕ್ಷಣಿಕ, ಸಂಸ್ಕೃತಿಕ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ವಿದ್ಯಾರ್ಥಿಗಳು ಶಿಕ್ಷಕರು, ಆಹ್ವಾನಿತ ಅಥಿತಿಗಳು ಮತ್ತು ಪೋಷಕರು ಉಪಸ್ತಿತರಿದ್ದರು.

