ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ.

JANANUDI.COM NETWORK

ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ  ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ  ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿ ದರು.

ಕಾಲೇಜಿನ ಎಲ್ಲಾ ವಿಭಾಗದ  ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.