ಮೂಡ್ಲಕಟ್ಟೆ ಎಂ ಐ ಟಿ: ಮಾತೃಭಾಷೆ  ದಿವಸ ಆಚರಣೆ.

JANANUDI.COM NETWORK

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ  ಮಾತೃಭಾಷೆ ದಿವಸದ ಆಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ  ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮಾತೃಭಾಷೆ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದರು. ಪ್ರತಿಯೊಬ್ಬರಿಗೂ ಅವರ ಮಾತೃಭಾಷೆಯ ಮೇಲಿನ ಅಭಿಮಾನ ಹೆಚ್ಚಿಸುವ ಉದ್ದೇಶದಿಂದ ಪ್ರತೀ ವರ್ಷ ಫೆಬ್ರುವರಿ 21 ರಂದು ಅಂತರರಾಷ್ಟ್ರೀಯ ಮಾತೃಭಾಷೆ ದಿನವನ್ನು ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಇ&ಸಿ ವಿಭಾಗದ ಪ್ರೊ. ಸೂಕ್ಷ್ಮ ಅಡಿಗ ಕಾರ್ಯಕ್ರಮ ನಿರ್ವಹಿಸಿದರು.