JANANUDI.COM NETWORK
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ಮಾದರಿ ಸ್ಪರ್ಧೆ ಹಾಗೂ ಪ್ರದರ್ಶನ ಕಾರ್ಯಕ್ರಮವು ಕಾಲೇಜಿನ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿ ತಂಡಗಳು ತಮ್ಮ ತಮ್ಮ ವಿಶೇಷ ವಿಜ್ಞಾನ ಮಾದರಿಗಳ ಜೊತೆ ಭಾಗವಹಿಸಿ ಸಂಬ್ರಮಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ ಕೋಟೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ದೆನ್ನೀಸ್ ಬಂಜಿ ಇವರು ಮಾತನಾಡಿ ವಿದ್ಯಾರ್ಥಿ ಸಮುದಾಯವು ಪರಿಸರ ಮತ್ತು ಪ್ರಕೃತಿ ರಕ್ಷಿಸುವ, ಮನುಕುಲದ ಏಳಿಗೆಗೆ ಪೂರಕವಾಗುವ ತಂತ್ರಜ್ಞಾನ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿವರಿಸಿದರು.
ಇನೋರ್ವ ಅತಿಥಿ ಹಾಗೂ ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಸಂದೀಪ್ ಗಾಣಿಗ ಇವರು ಮಾತನಾಡಿ ವಿಧ್ಯಾರ್ಥಿಗಳು ಕಲಿಕೆಯ ಜೊತೆಗೆ ಹೆಚ್ಚು ಹೆಚ್ಚು ಸಂಶೋಧನಾ ಮನೋಭಾವದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಮ್ಮ ಕೌಶಲ್ಯ ವೃದ್ಧಿಗೊಳಿಸಿಕೊಳ್ಳಿ ಎನ್ನುವ ಜೊತೆಗೆ ಅನೇಕ ಉಪಯುಕ್ತ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆಯವರು ಮಾತನಾಡಿ ವಿಜ್ಞಾನ ದಿನಾಚರಣೆ ಆಚರಿಸುವ ಮಹತ್ವ ವಿವರಿಸಿ, ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಒಂದಲ್ಲ ಒಂದು ಹೊಸ ವಿಚಾರ ಕಲಿಯಲು ಸಾಧ್ಯವಾಗುವುದರಿಂದ ಹೆಚ್ಚು ಹೆಚ್ಚು ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಎಂದು ಶುಭ ಹಾರೈಸಿದರು. ಉಪ ಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿ ಸೋಜಾ ರವರು ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇದೇ ಸಂಧರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ದೀಪಕ್ ಶೆಟ್ಟಿ .ಎಂ, ಕಾಲೇಜಿನ ಡೀನ್ ಅಕಾಡೆಮಿಕ್, ಡೀನ್ ಪ್ಲೇಸ್ಮೆಂಟ್, ಡೀನ್ ಡೆವಲಪ್ಮೆಂಟ್, ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಧ್ವಿತೀಯ ವರ್ಷದ ವಿಧ್ಯಾರ್ಥಿನಿ ಕುಮಾರಿ ಪೂಜಿತ ಸ್ವಾಗತಿಸಿ, ರೇಷ್ಮ ವಂದಿಸಿದರು. ವಿದ್ಯಾರ್ಥಿನಿ ಆಶ್ರಿತ ಕಾರ್ಯಕ್ರಮ ನಿರೂಪಿಸಿದರು.