ಮೂಡ್ಲಕಟ್ಟೆ ಎಂ ಐ ಟಿ: ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

JANANUDI.COM NETWORK

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವು ಕಾಲೇಜಿನ ಪ್ರಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಜನತಾ ಗ್ರೂಪ್, ಕೋಟ ಇದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ  ಎಂ.ಎಸ್. ಕೃಷ್ಣ  ಇವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಮುಂದಿನ ಎರಡು  ವರ್ಷಗಳ ವಿದ್ಯಾರ್ಥಿ ಜೀವನವನ್ನು ಯಾವ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಹಾಗೆಯೇ ಅರ್ಹತೆ, ಸಾಮರ್ಥ್ಯ ಮತ್ತು ಉದ್ಯೋಗಕ್ಕೆ ಬೇಕಾದ ಸೂಕ್ತತೆಗಳನ್ನು ಬೆಳೆಸಿಕೊಳ್ಳಲು ತಿಳಿಸಿದರು ./ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್  ಮದಾನೆಯವರು ವಿದ್ಯಾರ್ಥಿಗಳಿಗೆ ಕೆಲವಷ್ಟು ಸಲಹೆಗಳನ್ನು ನೀಡಿ ಶುಭ ಹಾರೈಸಿದರು./ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಪ್ರತಿಭಾ ಎಂ ಪಟೇಲ್ ಇವರು ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಚಾರವಾಗಿ ಮಾರ್ಗದರ್ಶನ ನೀಡಿದರು./ಕಾಲೇಜಿನ ಉದ್ಯೋಗ ಮತ್ತು ತರಬೇತಿ ವಿಭಾಗದ ಡೀನ್ ಆಗಿರುವ  ಪ್ರೊಫೆಸರ್ ಅಮೃತ್ಮಾಲ ಇವರು ವಿಧ್ಯಾರ್ಥಿಗಳಿಗೆ ತಮ್ಮ ವಿಭಾಗದ ಕುರಿತಾದ ವಿಚಾರಗಳನ್ನು ವಿವರಿಸಿದರು/ಈ ಸಂದರ್ಭದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು ಹಾಗೂ ಕಾಲೇಜು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ  ಅನುಪ ಶೆಟ್ಟಿ ಮತ್ತು ಸುಶ್ಮಿತಾ ಮಡಿವಾಳ ಪ್ರಾರ್ಥಿಸಿದರು. ವಿದ್ಯಾರ್ಥಿ ಪ್ರಸಾದ್ ಉಡುಪ ಮುಖ್ಯ ಅತಿಥಿಯವರನ್ನು ಸಭೆಗೆ ಪರಿಚಯಿಸಿದರು. ಸುಶ್ಮಿತಾ ಮಡಿವಾಳ ಸ್ವಾಗತಿಸಿದರು , ಪೂರ್ಣಿಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.