JANANUDI.COM NETWORK
ಕುಂದಾಪುರ,ಜೂ. 6: ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರದ ದಿನದ ಪ್ರಯುಕ್ತ ಆನ್ಲೈನ್ ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಪರಿಸರ ಸಂರಕ್ಷಣೆ ವಿಷಯದ ಮೇಲೆ ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ದೀಪಕ್ ಶೆಟ್ಟಿ ಇವರು ಮಾತನಾಡಿ ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಪರಿಸರವನ್ನು ಸ್ವಚ್ಚ ವಾಗಿಡುವುದರ ಜೊತೆ ಮರಗಳನ್ನ ಬೆಳೆಸುವುದರಿಂದ ಆಗುವ ಪ್ರಯೋಜನಗಳ ಮಾಹಿತಿಯನ್ನ ಸಮಾಜಕ್ಕೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದರೆ ಮುಂದಿನ ದಿನಗಲ್ಲಿ ಉತ್ತಮ ವಾತಾವರಣ ಕಾಣಬಹುದು ಎಂದು ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿ ಹೇಳಿದರು. ಕಾಲೇಜಿನ ಅಕಾಡೆಮಿಕ್ ಡೀನ್ ಡಾ|ಪ್ರತಿಭಾ ಪಾಟೇಲ್ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ವಿಧ್ಯಾರ್ಥಿಗಳ ಪಾತ್ರ ಪ್ರಮುಖವಾದುದು ಎಂದು ತಿಳಿಸಿದರು.
ಪರಿಸರಕ್ಕೆ ವಿದ್ಯಾರ್ಥಿಗಳ ಕೊಡುಗೆ ಕಾರ್ಯಕ್ರಮದಡಿ ತಮ್ಮ ಮನೆಯಲ್ಲಿ ಒಂದೊಂದು ಗಿಡ ನೆಟ್ಟು ವಿಶ್ವ ಪರಿಸರ ದಿನಕ್ಕೆ ಉತ್ತಮ ಅರ್ಥ ನೀಡಿ ಕಾರ್ಯಕ್ರಮದ ಮಹತ್ವ ಹೆಚ್ಚಿಸಿದರು. ಹಾಗೂ ವಿಧ್ಯಾರ್ಥಿಗಳು ಗಿಡ ನೆಡುತ್ತಿರುವ ವೀಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು.
ಪ್ರಾಂಶುಪಾಲರು, ಉಪ ಪ್ರಾಂಶುಪಾಲರು,ಡೀನ್ಗಳು, ವಿಭಾಗದ ಮುಖ್ಯಸ್ಥರು ಮತ್ತು ಎಲ್ಲಾ ಸಿಬ್ಬಂದಿಗಳು ವಿದ್ಯಾರ್ಥಿಗಳು ಪರಿಸರಕ್ಕೆ ಕೊಡುಗೆ ಆಗಿ ಮನೆಯಲ್ಲಿಯೇ ಗಿಡಗಳನ್ನ ನೆಟ್ಟು ಕಾರ್ಯಕ್ರಮ ಮೆರುಗು ಹೆಚ್ಚಿಸಿದಕ್ಕೆ ಶ್ಲ್ಯಾಘನೆ ವ್ಯಕ್ತ ಪಡಿಸಿದರು. ಇ & ಸಿ ವಿಭಾಗದ ಪ್ರೊಫೆಸರ್ ಸೂಕ್ಷ್ಮ ಅಡಿಗ ಕಾರ್ಯಕ್ರಮ ನಿರ್ವಹಿಸಿದರು.